ಬೆಂಗಳೂರು: ಶಿಕ್ಷಣ ತಜ್ಞ ಗುರುರಾಜ ಕರಜಗಿ ಅವರು ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಹಾಗೂ ಭಾರತೀಯ ವಿದ್ಯಾಭವನದ ವಿ.ಕೃ. ಗೋಕಾಕ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಟ್ರಸ್ಟ್‌ನ ಅಧ್ಯಕ್ಷ ಡಾ. ನರಹಳ್ಳಿ ಬಾಲ ಸುಬ್ರಹ್ಮಣ್ಯ, ಹಾಗೂ ಅನಿಲ್ ಗೋಕಾಕ್, ಎಚ್.ಎನ್. ಸುರೇಶ್, ಅಭಿನವ ರವಿಕುಮಾರ್ ಅವರು ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಕರಜಗಿ ಅವರನ್ನು ೨೦೨೪ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ ೨೯ರಂದು ಭಾರತೀಯ ವಿದ್ಯಾಭವನದಲ್ಲಿ ಹಮ್ಮಿ ಕೊಂಡಿರುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.