ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಇಂದು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಸಾಆಮಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯು 1 ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ನೋಂದಣಿಯಾದ ಗೃಹಿಣಿಯರಿಗೆ ಈವರೆಗೂ ಬರೋಬ್ಬರಿ 25 ಸಾವಿರ ಕೋಟಿ ಹಣವನ್ನು ಜಮೆ ಮಾಡಲಾಗಿದೆ. ನಾಡಿನ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಭಾರವನ್ನು ಗೃಹಲಕ್ಷ್ಮಿಯ ಮೂಲಕ ನಮ್ಮ ಹೆಗಲಿಗೇರಿಕೊಂಡು ವರ್ಷ ಪೂರೈಸಿದೆ. ಇದರಿಂದ 1.25 ಕೋಟಿ ಗೃಹಲಕ್ಷ್ಮಿಯರು ಆರ್ಥಿಕ ಸ್ವಾವಲಂಬಿಗಳಾಗಿ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಯೋಜನೆ ಜಾರಿಗೊಂಡ ನಂತರದಿಂದ ಈ ವರೆಗೆ ರೂ.25,000 ಕೋಟಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಿದ್ದೇವೆ. ಜಾಗತಿಕ ಮೂಲ ಆದಾಯ ಪರಿಕಲ್ಪನೆಯಡಿ ಜಾರಿಗೆ ಕೊಟ್ಟಿರುವ ಈ ಯೋಜನೆ ಇಂದು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ ಎಂದಿದ್ದಾರೆ.
