Home ತಾಜಾ ಸುದ್ದಿ ಗೃಹಲಕ್ಷ್ಮಿಯ ಕಟಾಕಟ್ ಈಗ ಕಟ್ ಕಟ್ ಆಗಿದೆ…

ಗೃಹಲಕ್ಷ್ಮಿಯ ಕಟಾಕಟ್ ಈಗ ಕಟ್ ಕಟ್ ಆಗಿದೆ…

0

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ “ಮ್ಯಾಜಿಕ್”ಆಗಿ ಹಣ ಜಮವಾಗುತ್ತದೆ

ಬೆಂಗಳೂರು: ಕಾಂಗ್ರೆಸ್​ನ ರಾಹುಲ್ ಗಾಂಧಿ ಗೃಹಲಕ್ಷ್ಮಿಯ ಹಣವನ್ನು ಮಹಿಳೆಯರಿಗೆ ‘‘ಕಟಾಕಟ್’’ ಎಂದು ವರ್ಗಾವಣೆ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಅದು ಕಟ್ ಕಟ್ ಆಗಿ ಹಣ ವರ್ಗಾವಣೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ ಸೇರಿ ಹಲವು ಯೋಜನೆಗಳ ಬಗ್ಗೆ ಮಾತು ಕೊಟ್ಟಿದ್ದರು. 2000 ಸಾವಿರ ಕೋಟಿ ರೂ. ಗೃಹ ಲಕ್ಷ್ಮಿ ಯೋಜನೆಗೆ ಮೀಸಲಿಟ್ಟು ಮಹಿಳೆಯ ಸಬಲೀಕರಣ ಮಾಡ್ತೀವಿ ಎಂದಿದ್ದರು. ಕಾಂಗ್ರೆಸ್​ನ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದ್ದರು. ಪ್ರತಿ ತಿಂಗಳು ಹಣವನ್ನು ವರ್ಗಾವಣೆ ಮಾಡುತ್ತೇವೆ ‘‘ಕಟಾಕಟ್’’ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ, ಈಗ ಕಟ್ ಕಟ್ ಮಾಡಿ ಹಣ ವರ್ಗಾವಣೆ ಮಾಡುತ್ತಿದ್ದಾರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು, ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು. ಮುಖ್ಯಮಂತ್ರಿಗಳು ಹಾಗು ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ನವರು 74 ಲಕ್ಷ ಕೋಟಿ ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ, ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ “ಮ್ಯಾಜಿಕ್”ಆಗಿ ಹಣ ಜಮವಾಗುತ್ತದೆ. ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಬೆಂಗಳೂರು, ಭಾರತದ ಸಿಲಿಕಾನ್ ಕ್ಯಾಪಿಟಲ್, ಜಾಗತಿಕ ತಂತ್ರಜ್ಞಾನ ಕೇಂದ್ರದಲ್ಲಿ DBT ವರ್ಗಾವಣೆ ಸರಿಪಡಿಸಲಾಗುವುದಿಲ್ಲವೇ? ಮೂರು ನಾಲ್ಕು ತಿಂಗಳಿಗೊಮ್ಮೆ ಹಣ ಜಮಾ ಮಾಡೋದು ಗೃಹಲಕ್ಷ್ಮಿ ಮತ್ತು ಯುವನಿಧಿ ಫಲಾನುಭವಿಗಳಿಗೆ ಸಹಾಯ ಆಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ನವರು ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಜಮಾ ದಿನಾಂಕ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

Exit mobile version