ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು

0
22
ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಕುರಿತು ಮಾತನಾಡಿರುವ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು, ನನಗೆ ಈ ಬಗ್ಗೆ ಮಾಹಿತಿ ಸಿಗುತ್ತಿದೆ ಎಂದು ಹೇಳಿದ್ದಾರೆ. ಈ ಹಿಂದೆ ಕರಸೇವಕರು ಅಯೋಧ್ಯೆಯಿಂದ ಹಿಂತಿರುಗುವಾಗ ಗೋದ್ರಾ ದುರಂತ ನಡೆದಿತ್ತು. ಈ ಬಾರಿ ಅಯೋಧ್ಯೆಗೆ ತೆರಳುವ ಭಕ್ತರಿಗೆ ಸರ್ಕಾರ ರಕ್ಷಣೆ ನೀಡಬೇಕು. ಈ ಬಗ್ಗೆ ಮಾಹಿತಿ ಸಿಕ್ಕಿಯೇ ನಾನು ಹೇಳುತ್ತಿದ್ದೇನೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

Previous articleಅಘೋಷಿತ ಬಂದ್ ವಾತಾವರಣ
Next article“ರಾಮಭಕ್ತರನ್ನು ಕೆಣಕಿದರೆ ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು ಎಚ್ಚರ”