ಗೋಬ್ಯಾಕ್ ಶೋಭಾ ಅಭಿಯಾನ ಆರಂಭ

0
23

ಚಿಕ್ಕಮಗಳೂರು: ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದ ಮೂರನೇ ಬಾರಿ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಹೇಳಿಕೆ ನೀಡಿದ್ದು, ಇದರ ಬೆನ್ನಲ್ಲೆ ಬಿಜೆಪಿ ಕಾರ್ಯ ಕರ್ತರು ನಗರದಲ್ಲಿ ಗೋಬ್ಯಾಕ್ ಶೋಭಾ ಅಭಿಯಾನ ಆರಂಭಿಸಿದ್ದು, ಬಿಜೆಪಿ ರಾಷ್ಟ್ರ ನಾಯಕರಿಗೆ ಪತ್ರ ರವಾನಿಸಿದ್ದಾರೆ.

ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಕಾರ್ಯಕರ್ತರು ಅಭಿಯಾನ ನಡೆಸಿದ್ದು, ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡದಂತೆ ಕಳೆದ ಕೆಲವು ತಿಂಗಳ ಹಿಂದೆಯೇ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಾರ್ಯಕರ್ತರು ಸಭೆ ನಡೆಸಿ ದ್ದಾರೆ ಎನ್ನಲಾಗುತ್ತಿದೆ.

ಇದರ ಬೆನ್ನಲೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಅಮಿತ್ ಶಾ ಅವರಿಗೆ ಅಂಚೆ ಮೂಲಕ ಪತ್ರ ರವಾನಿಸಿದ್ದಾರೆ.

ಶೋಭಾ ಕರಂದ್ಲಾಜೆ ಸ್ಪರ್ಧೆ ವಿರುದ್ದ ಕಳೆದ ಲೋಕಸಭೆ ಚುನಾವಣೆ ವೇಳೆ ಗೋಬ್ಯಾಕ್ ಶೋಭಾ ಅಭಿಯಾನ ನಡೆಸ ಲಾಗಿತ್ತು. ಕೆಲವು ದಿನಗಳ ಬಳಿಕ ಅಭಿಯಾನ ತೆರೆಮರೆ ಸರಿದಿತ್ತು.
ಶೋಭಾ ಕರಂದ್ಲಾಜೆ ಬಿಜೆಪಿ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿ ಯಾಗಿ ಎರಡನೇ ಬಾರಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿ ಮೋದಿ ಸಂಪುಟದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾದರು.

Previous articleಜನಪ್ರಿಯ ರೇಡಿಯೋ ನಿರೂಪಕ ಅಮೀನ್ ಸಯಾನಿ ನಿಧನ
Next articleಮುನಿಯಪ್ಪನವರೇ ನಿಮ್ಮ ಅಕ್ಕಿ ಎಲ್ಲಿ?