ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಅಮಾನವೀಯ ಮತ್ತು ಕರ್ನಾಟಕವೇ ತಲೆ ತಗ್ಗಿಸುವ ಘಟನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.
ರಾಜಧಾನಿ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಸಂಬಂಧ ಸರ್ಕಾರ ಮೌನ ತೋರಿರುವುದು ಅನುಮಾನ ಮೂಡಿಸುವಂತಿದೆ ಎಂದು ಹೇಳಿದ್ದಾರೆ.
ಸರ್ಕಾರಕ್ಕೆ ರಾಜಕೀಯ ಸ್ವಾರ್ಥವೇ ಹೆಚ್ಚಾಗಿದೆ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಸರ್ಕಾರಕ್ಕೆ ಜನರ ಕ್ಷೇಮಕ್ಕಿಂತ ಅವರ ರಾಜಕೀಯ ಸ್ವಾರ್ಥವೇ ಹೆಚ್ಚಾಗಿದೆ ಎಂದು ಸಚಿವ ಜೋಶಿ ಖಂಡಿಸಿದ್ದಾರೆ.
ಸರ್ಕಾರ ಕೂಡಲೇ ಎಚ್ಚೆತ್ತು ಯುವತಿಯ ರಕ್ಷಣೆಗೆ ಮುಂದಾಗಬೇಕು ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.