ಗ್ಯಾರಂಟಿಗಳಿಂದ ಜನರ ಆರ್ಥಿಕತೆ ಹೆಚ್ಚಳ

0
24
ಸಿದ್ದರಾಮಯ್ಯ

ಬೆಂಗಳೂರು.ಗ್ರಾ(ನೆಲಮಂಗಲ): ಮುಖ್ಯಮಂತ್ರಿಯಾಗಿ ಎಲ್ಲ ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುವುದು ನನ್ನ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನೆಲಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಡವರಿಗೆ ಅಕ್ಕಿ, ಉಚಿತ ವಿದ್ಯುತ್, ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಜಾತಿಧರ್ಮಕ್ಕೆ ಸೀಮಿತವಾಗಿಲ್ಲ. 1.14 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಬರುವ ದುಡ್ಡು, ಅವರ ಇತರೆ ಅವಶ್ಯಕತೆಗಳನ್ನು ಪೂರೈಸಿ, ಆರ್ಥಿಕತೆ ಹೆಚ್ಚುತ್ತದೆ. ಕೇವಲ ಶ್ರೀಮಂತರಲ್ಲದೇ, ಬಡವರು ಊಟ ಮಾಡುವಂತಾಗಬೇಕು, ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಬೇಕು. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭವಾಗಿದೆ. ಸಮಾಜ ನಿಂತ ನೀರಾಗದೆ ಬದಲಾವಣೆಯಾಗಬೇಕು. ಸಮಾಜಕ್ಕೆ ಚಲನೆ ದೊರೆತಾಗ ಆರ್ಥಿಕತೆ ಚುರುಕಾಗುತ್ತದೆ ಎಂದರು.

Previous articleಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ
Next articleಕರ್ನಾಟಕದ ಹಣದಿಂದ ತೆಲಂಗಾಣದಲ್ಲಿ ಗೆಲುವು