ಹುಬ್ಬಳ್ಳಿ: ಗ್ಯಾರಂಟಿ ಯೋಜನೆ ನಿಭಾಯಿಸಲು ಆಗದ ಕಾಂಗ್ರೆಸ್ ಸರ್ಕಾರ ಅದೇ ಕಾರಣಕ್ಕೆ ಅನೇಕ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸುತ್ತಿರಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ ರದ್ದುಪಡಿಸುತ್ತಿರುವ ಬಗ್ಗೆ ತಮಗೆ ಮಾಹಿತಿಯಿಲ್ಲ ರಾಜ್ಯದ ಆಹಾರ ಪೂರೈಕೆ ಸಚಿವ ಮುನಿಯಪ್ಪ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.
ಯೋಜನಾ ರಹಿತವಾದ ಗ್ಯಾರಂಟಿ ಯೋಜನೆಗಳನ್ನು ಪೂರೈಸಲಾಗದೇ ಹೀಗೆ ಒಂದೊಂದೇ ಗ್ಯಾರಂಟಿಗಳಿಗೆ ಕೊಕ್ಕೆ ಹಾಕಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಿಸಿತ್ತು. ಆದರೆ, ಇದುವರೆಗೂ ಕೊಟ್ಟಿಲ್ಲ. ನಾವು ನೀಡುವ 5 ಕೆಜಿ ಅಕ್ಕಿಯನ್ನೇ ನೀಡುತ್ತಿದೆ. ಹೇಳಿದಂತೆ ಬಾಕಿ ಐದು ಕೆಜಿ ಅಕ್ಕಿ ದುಡ್ಡು ಸಹ ಎಲ್ಲರಿಗೂ ಹಾಕಿಲ್ಲ ಎಂದರು.