ಗ್ಯಾರಂಟಿ ಯೋಜನೆಗಳ ಪೂರ್ಣ ಲಾಭ ಫಲಾನುಭವಿಗೆ ತಲುಪಲಿ

0
7

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ನೇಮಕಗೊಂಡಿರುವ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆಗಳು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಹೆಚ್​.ಎಂ.ರೇವಣ್ಣ ಅವರಿಗೆ ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಮೆಹರೂಜ್ ಖಾನ್, ಡಾ.ಪುಷ್ಪಾ ಅಮರನಾಥ್, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರಿಗೆ ಅಭಿನಂದನೆಗಳು. ಗ್ಯಾರಂಟಿ ಯೋಜನೆಗಳ ಪೂರ್ಣ ಲಾಭ ನಾಡಿನ ಪ್ರತಿ ಅರ್ಹ ಫಲಾನುಭವಿಗೆ ತಲುಪಿಸುವಲ್ಲಿ ತಾವೆಲ್ಲರೂ ಶಕ್ತಿಮೀರಿ ಶ್ರಮಿಸಲಿದ್ದೀರಿ ಎಂಬ ನಂಬಿಕೆಯಿದೆ ಎಂದಿದ್ದಾರೆ.

Previous articleಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್
Next articleಅವಳಿ ನಗರಕ್ಕೆ ಉಪರಾಷ್ಟ್ರಪತಿ ಆಗಮನ