ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನವನ್ನು ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಚಿಕ್ಕಮಗಳೂರಿಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ನೇತೃತ್ವದಲ್ಲಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ನಗರದ ಪಾಂಚಜನ್ಯ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಆಜಾದ್ ಪಾರ್ಕ್ ವೃತ್ತದವರೆಗೆ ಸಾಗಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎನ್. ರವಿಕುಮಾರ್ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ 2023-24 ರಲ್ಲಿ ಮೀಸಲಿಟ್ಟಿದ್ದ 11 ಸಾವಿರ ಕೋಟಿ, 2024-25 ರಲ್ಲಿ 14 ಸಾವೀರ ಕೋಟಿ ಮತ್ತು ಈ ಬಾರಿ ಬಜೆಟ್ ಸೇರಿ ಒಟ್ಟು 40 ಸಾವಿರ ಕೋಟಿ ಅನುದಾನವನ್ನು ಅನ್ಯ ಯೋಜನೆಗಳಿಗೆ ದುರ್ಬಳಕೆ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.
ಸೋಮವಾರ ನಡೆಯುವ ಎರಡು ಸದನದಲ್ಲಿ ಈ 39 ಸಾವಿರ ಕೋಟಿ ಹಣವನ್ನು ವಾಪಾಸ್ ನೀಡುವಂತೆ ಪ್ರತಿಭಟನೆ ನಡೆಸುತ್ತೇವೆ ಎಂದು ರವಿಕುಮಾರ್ ಹೇಳಿದರು