ಬೆಂಗಳೂರು : ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ನಿಲ್ಲಲಿದೆ ಎಂಬ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ನಮ್ಮ ತಾಯಂದಿರ ಬದುಕು ಹಾಗೂ ಸಂಸಾರ ಉತ್ತಮವಾಗಿ ಸಾಗಲಿ ಎಂದು ನಾವು ಗೃಹಲಕ್ಷ್ಮಿ ಹಣ ನೀಡುತ್ತಿದ್ದೇವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊರಟಿದೆ. ಜನ ಹುಷಾರಾಗಿರಬೇಕು, ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ, ರಾಜ್ಯದ ಜನ ನಮ್ಮ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತವನ್ನು ಒಪ್ಪಿದ್ದು, ಈ ಬಾರಿ ಉಪಚುನಾವನೇಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿಲಿದೆ ಎಂದರು.