ಗ್ಯಾರಂಟಿ ಯೋಜನೆ ಬದಲಾಗಿ ಪೆನ್ ಡ್ರೈವ್ ಬಗ್ಗೆ ಮಾತನಾಡುತ್ತಿದ್ದಾರೆ

0
13

ಧಾರವಾಡ: ಕಾಂಗ್ರೆಸ್ ನಾಯಕರು ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದರು. ಈಗ ಚುನಾವಣಾ ಭಾಷಣಗಳಲ್ಲಿ ಪೆನ್ ಡ್ರೈವ್ ಬಗ್ಗೆಯೇ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ನೇರವಾಗಿ ಕಾಂಗ್ರೆಸ್ ಸರ್ಕಾರ ಇಂತಹ ಮತಾಂತರ ಶಕ್ತಿಗಳಿಗೆ ಬೆಂಬಲ ನೀಡುತ್ತಿದೆ. ಕೇರಳ ಸರ್ಕಾರದ ಮಾದರಿಯಲ್ಲಿ ಈ ಸರ್ಕಾರ ನಡೆಯುತ್ತಿದೆ, ಹುಬ್ಬಳ್ಳಿಯಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸದ್ದಾಂ ಎನ್ನುವ ವ್ಯಕ್ತಿ ಅತ್ಯಾಚಾರ ಮಾಡಿದ್ದಾನೆ. ಇದು ಕೂಡ ಲವ್ ಜಿಹಾದ್ ಪ್ರಕರಣವಾಗಿದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಇಂದು ಕುಟುಂಬಗಳು ಭಯದಿಂದ ಜೀವನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ನಾಯಕರು ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದರು. ಈಗ ಚುನಾವಣಾ ಭಾಷಣಗಳಲ್ಲಿ ಪೆನ್ ಡ್ರೈವ್ ಬಗ್ಗೆಯೇ ಮಾತನಾಡುತ್ತಿದ್ದಾರೆ. ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕುರಿತು ಈ ಮೊದಲೇ ಪತ್ರ ಬರೆದಿದ್ದರು ಎನ್ನುವುದು ಶುದ್ಧ ಸುಳ್ಳು. ಅಂತಹ ಪತ್ರ ಇದುವರೆಗೂ ನನ್ನ ಕೈ ತಲುಪಿಲ್ಲ, ಇನ್ನು ಈ ಪ್ರಕರಣವನ್ನು ಬಿಜೆಪಿ ಬೆಂಬಲಿಸುವ ಅಥವಾ ಸಹಕಾರ ನೀಡುವ ಪ್ರಶ್ನೆಯೇ ಇಲ್ಲ ಎಂದರು.

Previous articleವಂಶಿಕಾ ಎಂದು ನಾಮಕರಣ ಮಾಡಿದ ಬೊಮ್ಮಾಯಿ
Next articleರಕ್ಷಣೆ ಒದಗಿಸಿದರೆ ಇಂದೇ ಎಸ್‌ಐಟಿ ಮುಂದೆ ಹಾಜರು