Home ತಾಜಾ ಸುದ್ದಿ ಚಕ್ಕರ್ ಹಾಕಿ ಖಾಸಗಿ ಕೆಲಸ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ

ಚಕ್ಕರ್ ಹಾಕಿ ಖಾಸಗಿ ಕೆಲಸ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ

0

ಬೆಳಗಾವಿ: ಶಾಲೆಗೆ ಚಕ್ಕರ ಹಾಕಿ ಬೇರೆ ಬೇರೆ ಕೆಲಸ ಮಾಡುವ ಶಿಕ್ಷಕರ ಮೇಲೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಬೇಕು. ಅದನ್ನು ಬಿಟ್ಟು ಬೇರೆ ಬೇರೆ ಕೆಲಸ, ಸಂಘಟನೆಯಲ್ಲಿ ಗುರುತಿಸಿಕೊಂಡರೆ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದರು.
ಶಿಕ್ಷಕರು ತಮ್ಮ ಬೇಡಿಕೆ ಈಡೇರಿಸಲು ಪ್ರತಿಭಟನೆ ಮಾಡಿದರೆ ತಪ್ಪಲ್ಲ. ಪ್ರತಿಭಟನೆ ಮಾಡುವ ಹಕ್ಕು ಇದೆ. ಹಾಗಂತ ಬೇರೆ ಬೇರೆ ಕಾರಣಗಳಿಂದ ಶಾಲೆಗಳಿಗೆ ರಜೆ ಹಾಕಿ ಮಕ್ಕಳಿಗೆ ತೊಂದರೆಯಾಗುವಂತೆ ಮಾಡಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.

Exit mobile version