ಹುಬ್ಬಳ್ಳಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ ಗೆಲ್ಲುವ ಅಭ್ಯರ್ಥಿಯಾಗಿದ್ದಾರೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಹೈಕಮಾಂಡ್ ಯೋಗ್ಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಅರವಿಂದ ಬೆಲ್ಲದ ಹೇಳಿದರು.
ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯ. ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ ಅವರಿಗೆ ಈ ಎಲ್ಲ ಯೋಗ್ಯತೆಯಿದೆ. ಎನ್‌ಡಿಎ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತಾರೆ ಎಂದರು.