ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡರ ಸಭೆ ಬಳಿಕ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಘೋಷಣೆ ಮಾಡಿದರು. ನಾಳೆ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುತ್ತಾರೆ. ಬಿಎಸ್ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.


























