Home ತಾಜಾ ಸುದ್ದಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಓರ್ವ ಸಜೀವ ದಹನ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಓರ್ವ ಸಜೀವ ದಹನ

0

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರ ಬರಲು ಸಾಧ್ಯವಾಗದೇ ಸಜೀವ ದಹನವಾಗಿದ್ದಾರೆ.
ಘಟನೆಯಿಂದಾಗಿ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version