ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಹುಚ್ಚಾಟ

0
19

ಸುಳ್ಯ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ ಕಾರಿನ ಮೇಲ್ಭಾಗ ತೆರೆದು ಆ ಭಾಗದಿಂದ ಇಬ್ಬರು ಯುವಕರು ಮೇಲೆ ಬಂದ್ದಿದ್ದು, ಇಬ್ಬರು ಹಿಂದಿ ಸೀಟಿನ ಎಡ ಹಾಗೂ ಬಲ ಬದಿಯ ಡೋರ್ ಭಾಗದಿಂದ ಮೇಲೆ ಬಂದಿದ್ದು, ಇಬ್ಬರು ಮುಂದಿನ ಎಡರೂ ಡೋರ್‌ನ ಡ್ರೈವರ್ ಸೈಡ್ ಭಾಗದಿಂದಲೂ ಮೇಲೆದ್ದು ನಿಂತು ಹುಚ್ಚಾಟ ಮೆರೆಯುತ್ತಿರುವುದು ವಿಡಿಯೋದಲ್ಲಿದೆ. ಯುವಕರ ಕೃತ್ಯವನ್ನು ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದವರು ಚಿತ್ರೀಕರಿಸಿಕೊಂಡಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.

Previous articleಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು
Next articleರಾಮನವಮಿಗೆ ಯಾದಗಿರಿಯಲ್ಲಿ ಸಿದ್ದಗೊಂಡ  ರಾಮಮಂದಿರ ಕಲಾಕೃತಿ