ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರು ಸಾವು

0
39

ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐದು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಕೇಂದ್ರ ರೈಲ್ವೆಯ ದಿವಾ ಮತ್ತು ಕೋಪರ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿನಿಂದ 10ಕ್ಕೂ ಅಧಿಕ ಪ್ರಯಾಣಿಕರು ಕೆಳಗೆ ಬಿದ್ದಿದ್ದು, ಐದಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ, ಪುಷ್ಪಕ್ ಎಕ್ಸ್‌ಪ್ರೆಸ್ ಕಸರಾಕ್ಕೆ ತೆರಳುತ್ತಿದ್ದಾಗ ಸೆಂಟ್ರಲ್ ರೈಲ್ವೆಯ ದಿವಾ ಮತ್ತು ಕೋಪರ್ ರೈಲ್ವೆ ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯಲ್ಲಿ ರೈಲು ತುಂಬಾ ಜನದಟ್ಟಣೆಯಿಂದ ತುಂಬಿತ್ತು ಮತ್ತು ಘಟನೆ ಸಂಭವಿಸಿದಾಗ ಪ್ರಯಾಣಿಕರು ಬಾಗಿಲಿನಿಂದ ನೇತಾಡುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ರೈಲ್ವೆ ಹಳಿಗಳಿಂದ ಹೊರತೆಗೆದು ಕಲ್ವಾ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Previous articleಮೇಲ್ಛಾವಣಿ ಕುಸಿದು ಮಹಿಳೆ ಸಾವು
Next articleದೇವಸ್ಥಾನ ಬಳಿ ಪ್ರಾಣಿ ದೇಹ ಪತ್ತೆ: ಭಕ್ತರ ಆಕ್ರೋಶ