ಚಳಿಗಾಲದ ಅಧಿವೇಶನಕ್ಕೆ ಇಂಡಿಗೋ ಏರ್‌ಲೈನ್ಸ್ ವಿಶೇಷ ವಿಮಾನ ಸಂಚಾರ

0
13

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನದ ನಿಮಿತ್ತ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ಡಿ. ೯ರಿಂದ ೧೯ರ ವರೆಗೆ ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ವಿಮಾನ ಸಂಚಾರವನ್ನು ಪ್ರಾರಂಭ ಮಾಡಲು ನಿರ್ಧರಿಸಿದೆ ಮತ್ತು ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಬೆಳಗಾವಿ ಮತ್ತು ಬೆಂಗಳೂರು ನಡುವೆ ಪ್ರಯಾಣಿಸುವ ಜನಪ್ರತಿನಿಧಿಗಳು, ವ್ಯಾಪಾರಿಗಳು, ವೃತ್ತಿಪರರು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮನವಿ ಮಾಡಲಾಗಿತ್ತು. ನನ್ನ ಮನವಿಗೆ ಸ್ಪಂಧಿಸಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ವಿಮಾನ ಸಂಚಾರ ನಡೆಸಲಿದೆ. ಈ ವಿಮಾನಯಾನ ಸೇವೆ ಸೌಲಭ್ಯವನ್ನು ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ವಿನಂತಿಸಿದರು. ಇಂಡಿಗೋ ಏರ್‌ಲೈನ್ಸ್ ಸಂಸ್ಥೆಗೆ ಜಿಲ್ಲೆಯ ಜನತೆ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

Previous articleಪ್ರೇಮಕ್ಕೆ ಅಡ್ಡಿ, ತಾಯಿ-ಮಗನ ಕೊಂದ ಪ್ರಿಯಕರ
Next articleತ್ರಿವಳಿ ಕರುಗಳಿಗೆ ಜನ್ಮ ನೀಡಿದ ಹಸು