Home News ಚಳ್ಳಕೆರೆ ನಗರಸಭೆಗೆ ನೂತನ ಅಧ್ಯಕ್ಷೆಯಾಗಿ ಶಿಲ್ಪಾ ಮರುಳೀಧರ ಅವಿರೋಧ ಆಯ್ಕೆ

ಚಳ್ಳಕೆರೆ ನಗರಸಭೆಗೆ ನೂತನ ಅಧ್ಯಕ್ಷೆಯಾಗಿ ಶಿಲ್ಪಾ ಮರುಳೀಧರ ಅವಿರೋಧ ಆಯ್ಕೆ

ಚಳ್ಳಕೆರೆ : ಚಳ್ಳಕೆರೆ ನಗರಸಭೆಗೆ ನೂತನ ಅಧ್ಯಕ್ಷೆಯಾಗಿ ಶಿಲ್ಪಾ ಮರುಳೀಧರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಆಯ್ಕೆಯು ನಗರದ ಸಮಗ್ರ ಅಭಿವೃದ್ಧಿಗೆ ಹೊಸ ಚಾಲನೆ ನೀಡುವ ನಿರೀಕ್ಷೆಯಿದೆ. ಶಿಲ್ಪಾ ಮರುಳೀಧರ ಅವರ ಆಯ್ಕೆಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಗಣ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

ನಗರಸಭೆಯ ಸಭಾಂಗಣದಲ್ಲಿ ನೂತನ ಅಧ್ಯಕ್ಷೆ ಶಿಲ್ಪಾ ಮರುಳೀಧರ ಅವರಿಗೆ ಶುಭಾಶಯ ಕೋರಿ ಮಾತನಾಡಿದ ಶಾಸಕ ಟಿ. ರಘುಮೂರ್ತಿ, ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ನಗರಸಭೆಯನ್ನು ಪ್ರತಿನಿಧಿಸುತ್ತಿರುವ ಅಧ್ಯಕ್ಷರುಗಳು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧರಾಗಿದ್ದಾರೆ ಎಂದು ತಿಳಿಸಿದರು. ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಶಿಲ್ಪಾ ಮರುಳೀಧರ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಿ, ನಗರಸಭೆ ಅಧಿಕಾರದಲ್ಲಿರುವಷ್ಟು ದಿನ ನಗರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು ಎಂದು ಅವರು ಒತ್ತಿ ಹೇಳಿದರು. “ಎಲ್ಲಾ ಪಕ್ಷಗಳ ಸಹಕಾರದೊಂದಿಗೆ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಅಭಿವೃದ್ಧಿಯತ್ತ ಸಾಗಬೇಕು” ಎಂದು ಶಾಸಕ ರಘುಮೂರ್ತಿ ಇದೇ ಸಂದರ್ಭದಲ್ಲಿ ತಿಳಿಸಿದರು.

ನೂತನ ನಗರಸಭೆ ಅಧ್ಯಕ್ಷೆ ಶಿಲ್ಪಾ ಮರುಳೀಧರ ಅವರು ಮಾಧ್ಯಮದೊಂದಿಗೆ ಮಾತನಾಡಿ, ಅಧಿಕಾರದಲ್ಲಿರುವಷ್ಟು ದಿನಗಳ ಕಾಲ ಸಾರ್ವಜನಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಮೂಲಕ ನಗರಸಭೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ತಮ್ಮ ಆಯ್ಕೆಗೆ ಸಹಕಾರ ನೀಡಿದ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ, ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಮಾಜಿ ನಗರಸಭೆ ಸದಸ್ಯರಾದ ಕೆ.ಸಿ. ನಾಗರಾಜ್ ಸೇರಿದಂತೆ ಎಲ್ಲ ಸದಸ್ಯರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಅದ್ದೂರಿ ಮೆರವಣಿಗೆ ಮೂಲಕ ಸಂಭ್ರಮಾಚರಣೆ
ಕಳೆದ ಮೂರು ಬಾರಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಶಾಸಕ ಟಿ. ರಘುಮೂರ್ತಿ ನೇತೃತ್ವದಲ್ಲಿ ಚಳ್ಳಕೆರೆ ನಗರಸಭೆ ಕಾಂಗ್ರೆಸ್ ಪಾಲಿಗೆ ದಕ್ಕಿದೆ. ನೂತನವಾಗಿ ಆಯ್ಕೆಯಾದ ಚಳ್ಳಕೆರೆ ನಗರಸಭೆ ಅಧ್ಯಕ್ಷೆ ಶಿಲ್ಪಾ ಮರುಳೀಧರ ಅವರನ್ನು ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷೆ ಕವಿತಾ ಬೋರಯ್ಯ, ಮಾಜಿ ಅಧ್ಯಕ್ಷ ಮಂಜುಳಾ ಪ್ರಸನ್ನ ಕುಮಾರ್,ಕುಶಲ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ
ಆರ್. ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿಯ ಅಧ್ಯಕ್ಷ ಟಿ. ಮಲ್ಲಿಕಾರ್ಜುನ್, ಸದಸ್ಯರಾದ ಎಂ.ಜೆ. ರಾಘವೇಂದ್ರ, ರಮೇಶ್ ಗೌಡ, ಚಳ್ಳಕೆರಪ್ಪ, ವಿರುಪಾಕ್ಷ, ಮಲ್ಲಿಕಾರ್ಜುನ್, ಹೊಯ್ಸಳ ಗೋವಿಂದ, , ಬಿ. ಫರೀದ್ ಖಾನ್, ಸುಮಾ ಭರಮಯ್ಯ ,ನಾಮ ನಿರ್ದೇಶನ ಸದಸ್ಯರಾದ , ನೇತಾಜಿ ಪ್ರಸನ್ನ, ವೀರಭದ್ರಪ್ಪ, ಬಡಗಿ ಪಾಪಯ್ಯ, ಅನ್ವರ್ ಮಾಸ್ಟರ್,ನಟರಾಜ್ ಮುಖಂಡರಾದ , ಲಕ್ಷ್ಮಿ ಮೋಟಾರ್ ಬೋರಯ್ಯ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ ,ಜಿ.ಟಿ.ಶಶಿಧರ್, ಮುಖಂಡರಾದ ಕೃಷ್ಣಮೂರ್ತಿ, ಕರಿಕೆರೆ ರಾಜಣ್ಣ, ಸೇವದಳ ಅಧ್ಯಕ್ಷರಾದ ತಿಪ್ಪೇಸ್ವಾಮಿ,
ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version