ದುಬೈ: ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ಮತ್ತು ಪಾಕಿಸ್ತಾನ ತಂಡಗಳು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ತಲಾ ಒಂದು ಪಂದ್ಯಗಳನ್ನು ಆಡಿದ್ದು. ಇದರಲ್ಲಿ ಟೀಮ್ ಇಂಡಿಯಾ ಗೆಲುವು ಸಾದಿಸಿದ್ದರೆ, ಪಾಕಿಸ್ತಾನ ಸೋಲು ಕಂಡಿದೆ. ಐಸಿಸಿ ಟೂರ್ನಿಯಲ್ಲಿ, ಏಕದಿನ ವಿಶ್ವಕಪ್‌ನಲ್ಲಿ ಉಭಯ ತಂಡಗಳ ನಡುವೆ 21 ಪಂದ್ಯಗಳು ನಡೆದಿದ್ದು, ಭಾರತ 16 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಕೇವಲ 4 ಪಂದ್ಯಗಳನ್ನು ಗೆದ್ದಿದೆ.
