ಕಲಬುರಗಿ: ಚಾಕುವಿನಿಂದ ಇರಿದು ಆಟೋ ಚಾಲಕನ ಬರ್ಬರ ಹತ್ಯೆಗೈದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.
ಗೋಪಾಲ್ ಜಾಧವ್ 48 ಕೊಲೆಯಾದ ಆಟೋ ಚಾಲಕನೆಂದು ತಿಳಿದು ಬಂದಿದೆ.
ನಿನ್ನೆ ಸಂಜೆ ಜಮೀನಿಗೆ ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಬಳಿಕ ಜಮೀನಿನಲ್ಲಿರುವ ಮರಕ್ಕೆ ನೇಣು ಹಾಕಿದ್ದಾರೆ ದುಷ್ಕರ್ಮಿಗಳು.
ಮರಕ್ಕೆ ನೇಣು ಬಿಗಿದಿದ್ದ ಶವದ ಮರದಿಂದ ಕೆಳಗೆ ಹಗ್ಗ ಕಡಿದು ಬಿದ್ದಿರುವ ಶವವನ್ನು ಜನ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿದು ಕುಂಚಾವರಂ ಪೊಲೀಸ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.