ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಅ.16 ರಂದು ಬೆಳಗ್ಗೆ ಸಂಭವಿಸಿದೆ.
ಬೆಳ್ತಂಗಡಿ ಕಡೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಸದ್ಯ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಕಾಮಗಾರಿ ಪ್ರಗತಿಯಲ್ಲಿದ್ದ ಚರಂಡಿಗೆ ಬಿದ್ದ ಕಾರನ್ನು ಕ್ರೇನ್ ಬಳಸಿ ಮೇಲೆಕ್ಕೆತ್ತಲಾಗಿದೆ.