ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ: 17 ಜನರಿಗೆ ಗಾಯ

0
32

ಕಾರವಾರ: ಕೆಎಸ್​ಆರ್​ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು 17 ಜನ ಗಾಯಗೊಂಡ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಈ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಕೆಎಸ್​ಆರ್​ಟಿಸಿ ಬಸ್​ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿತ್ತು ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ, ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ.

Previous articleಉತ್ತಮ ಗುರುವಿಗೆ ಉತ್ತಮ ವಿದ್ಯಾರ್ಥಿ ದೊರಕುವುದು ಮುಖ್ಯ
Next articleಹಾಡಹಗಲೇ ವ್ಯಕ್ತಿಯೊಬ್ಬನ ಕುತ್ತಿಗೆ ಸೀಳಿ ಬರ್ಬರ ಹತ್ಯೆ