ಹುಬ್ಬಳ್ಳಿ: ಚಿಕಿತ್ಸೆಗೆಂದು ದಾಖಲಾಗಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ನಗರದ ನೇಕಾರನಗರದ ನಿವಾಸಿ ಆದರ್ಶ ಗೊಂದಕರ್ ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಜ್ವರದ ಹಿನ್ನಲೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ. ಬೆಳಗಿನ ಜಾವ ಕಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯ ಕಿಟಕಿ ಮೂಲಕ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದನು. ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಕೂಡಾ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾನೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.