ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತ ದೃಷ್ಟಿಯಿಂದ ಐದು ತಾಲೂಕುಗಳ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದರೆ, ಒಂದು ತಾಲೂಕಿನ ಕೆಲ ಭಾಗದ ಅಂಗನವಾಡಿ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ನಗರಸಭಾ ವ್ಯಾಪ್ತಿ, ಲಕ್ಯಾ ಹಾಗೂ ಅಂಬಳೆ ಹೋಬಳಿಗಳನ್ನು ಹೊರತುಪಡಿಸಿ ಉಳಿದ ಭಾಗದ ಎಲ್ಲ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
