ಚಿಕ್ಕಮಗಳೂರು: ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಜು.31ರಂದು ಸಹ ಮಲೆನಾಡಿನ ಆರು ತಾಲ್ಲೂಕಿನ ಶಾಲಾ– ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಕೊಪ್ಪ, ಕಳಸ, ಮೂಡಿಗೆರೆ, ಚಿಕ್ಕಮಗಳೂರು, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನ ಶಿಶುಪಾಲನಾ ಕೇಂದ್ರ, ಅಂಗನವಾಡಿ, ಶಾಲೆಗಳು, ಪಿಯು, ಪದವಿ ಮತ್ತು ಎಲ್ಲಾ ರೀತಿಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.