ಚಿಕ್ಕಮಗಳೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತ ದೃಷ್ಟಿಯಿಂದ ಆರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಜು.31ಕ್ಕೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಮಲೆನಾಡು ತಾಲೂಕುಗಳಾದ ಕೊಪ್ಪ, ಕಳಸ, ಮೂಡಿಗೆರೆ, ಚಿಕ್ಕಮಗಳೂರು, ಶೃಂಗೇರಿ, ಹಾಗೂ ಎನ್.ಆರ್.ಪುರ ತಾಲೂಕು ವ್ಯಾಪ್ತಿಯ ಎಲ್ಲಾ ಅಂಗನವಾಡಿಗಳು, ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ
ರೆಡ್ ಅಲರ್ಟ್: ಜಿಲ್ಲೆಯ ಜನತಾ ಮುಂದಿನ 24 ಗಂಟೆಗಳ ಕಾಲ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವುದರಿಂದಾಗಿ ರೆಡ್ ಅಲರ್ಟ್ ಘೋಷಣೆ ಮಾಡಿರುವುದಾಗಿ ಹವಮಾನ ಇಲಾಖೆ ತಿಳಿಸಿದೆ.
ಜುಲೈ 31ರಂದು ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್ ರಂದು ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.