ಚುನಾವಣಾ ಆಯೋಗದ ಮೇಲೆ ರಾಹುಲ್ ಕಿಡಿ

0
22

ಬೆಳಗಾವಿ: ಬಿಜೆಪಿಯವರು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ. ಚುನಾವಣಾ ಆಯೋಗದ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಜನರ ನಂಬಿಕೆ ಕ್ರಮೇಣ ಕಡಿಮೆಯಾಗುತ್ತಿರುವುದು ಕಳವಳಕಾರಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎಂದು ಹೇಳಿದರು.
ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಗರಂ ಆದರು.
ಕೆಲ ದಿನಗಳ ಹಿಂದೆ ಅವರು ಕೋರ್ಟ್ ಆದೇಶದ ಮಾಹಿತಿಯನ್ನು ಹಂಚಿಕೊಳ್ಳಲು ಚುನಾವಣಾ ನಿಯಮಗಳನ್ನು ಬದಲಾಯಿಸಿದರು. ಕೆಲವೊಮ್ಮೆ ಮತದಾರರ ಹೆಸರು ಪಟ್ಟಿಯಿಂದ ಅಳಿಸಿ ಹೋಗುವುದು. ಕೆಲವೊಮ್ಮೆ ಮತದಾನ ಮಾಡದಂತೆ ತಡೆಯುವುದು, ಕೆಲವೊಮ್ಮೆ ಪಟ್ಟಿಯಲ್ಲಿ ಮತದಾರರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ. ಕೊನೆಯ ಕ್ಷಣದಲ್ಲಿ ಅನಿರೀಕ್ಷಿತವಾಗಿ ಮತದಾನದ ಪ್ರಮಾಣ ಹೆಚ್ಚಾಗುವುದು, ಈ ಕೆಲ ಪ್ರಶ್ನೆಗಳು ಉದ್ಭವಿಸುತ್ತಲೇ ಇರುತ್ತವೆ. ಇವುಗಳಿಗೆ ಯಾವುದೇ ತೃಪ್ತಿಕರ ಉತ್ತರ ಕಂಡುಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Previous articleನಕಾಶೆ ಯಡವಟ್ಟು, ತಪ್ಪೊಪ್ಪಿಕೊಂಡ ಕಾಂಗ್ರೆಸ್
Next articleಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಇನ್ನಿಲ್ಲ