ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಹೃದಯಾಘಾತದಿಂದ ಸಾವು

0
15

ಮುಧೋಳ: ಚುನಾವಣೆ ಕರ್ತವ್ಯಕ್ಕೆಂದು ತೆರಳುತ್ತಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ನಗರದ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಗೋವಿಂದಪ್ಪ ಸಿದ್ದಾಪುರ (47) ಮೃತ ದುರ್ದೈವಿಯಾಗಿದ್ದಾರೆ ಶಿಕ್ಷಕರು ಆಗಿರುವ ಇವರು ಮುಧೋಳ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಯಾಗಿದ್ದು. ಬಿದರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ಜಮಖಂಡಿ ಮತಕ್ಷೇತ್ರದಲ್ಲಿ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಳಿಸಿದ್ದರಿಂದ ಸೋಮವಾರ ಬೆಳಗ್ಗೆ ಜಮಖಂಡಿ ತಾಲ್ಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದರು. ಬಸ್ ನಿಲ್ದಾಣದ ಬಳಿ ಏಕಾಏಕಿ ಎದೆನೋವು ಕಾಣಿಸಿಕೊಂಡ ಪರಿಣಾಮ ಶಿಕ್ಷಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ, ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Previous articleಭ್ರೂಣಲಿಂಗ ಪತ್ತೆ ದಂಧೆ: ಮೂವರ ಬಂಧನ
Next articleಮಾಜಿ ಶಾಸಕ ನಾಗರೆಡ್ಡಿ ಪಾಟೀಲ್​ ನಿಧನ