Home Advertisement
Home ತಾಜಾ ಸುದ್ದಿ ಚುನಾವಣೆಯಲ್ಲಿ ಜೆಡಿಎಸ್ ಆತ್ಮಹತ್ಯೆ

ಚುನಾವಣೆಯಲ್ಲಿ ಜೆಡಿಎಸ್ ಆತ್ಮಹತ್ಯೆ

0
66
ಸಿಎಂ ಇಬ್ರಾಹಿಂ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವುದಕ್ಕೆ ಜೆಡಿಎಸ್‌ನಿಂದ ಉಚ್ಚಾಟಿತರಾಗಿರುವ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದು, ಈ ಚುನಾವಣೆಯಲ್ಲಿ ಜೆಡಿಎಸ್ ಸೂಸೈಡ್ ಮಾಡಿಕೊಳ್ಳಲಿದೆ ಎಂದಿದ್ದಾರೆ.
ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲೋದು ಬಹಳ ಕಷ್ಟ ಇದೆ. ಬಿಜೆಪಿಯವರ ಒತ್ತಡಕ್ಕೆ ಮಣಿದು ಖುದ್ದು ಕುಮಾರಸ್ವಾಮಿಯವರೇ ಸ್ಪರ್ಧೆ ಮಾಡ್ತಿದ್ದಾರೆ. ಮೈತ್ರಿ ಮಾಡಿಕೊಂಡು ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಳಿಸುವ ಯೋಚನೆಯಲ್ಲಿದ್ದರು. ಆದರೆ ಬಿಜೆಪಿ ಅದಕ್ಕೆ ಒಪ್ಪದಿದ್ದಿಕ್ಕೆ ಅವರೇ ಖುದ್ದು ಅಭ್ಯರ್ಥಿಯಾಗಿದ್ದಾರೆ. ಆದರೆ, ಅವರು ಗೆಲ್ಲೋದು ಕಷ್ಟ ಇದೆ. ಮಂಡ್ಯದಲ್ಲಿ ಈ ಬಾರಿ ಅಚ್ಚರಿಯ ಫಲಿತಾಂಶ ಬರುತ್ತೆ ಎಂದು ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.