Home ನಮ್ಮ ಜಿಲ್ಲೆ ಚಿತ್ರದುರ್ಗ ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ೩ ಶಿಕ್ಷಕಿಯರ ಅಮಾನತು

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ೩ ಶಿಕ್ಷಕಿಯರ ಅಮಾನತು

0

ಚಿತ್ರದುರ್ಗ: ಚುನಾವಣೆ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಹ ಶಿಕ್ಷಕಿ ಜಯಮ್ಮ ಕೆ.ಬಿ., ತೋಪುರ ಮಾಳಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಹ ಶಿಕ್ಷಕಿ ರೂಪ ಎಸ್., ಮಠದ ಕುರುಬರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ದೈಹಿಕ ಶಿಕ್ಷಕರಾದ ಕೆ.ಗಿರಿಜಮ್ಮ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಮೂವರು ಶಿಕ್ಷಕಿಯರನ್ನು ಮತಗಟ್ಟೆ ಅಧಿಕಾರಿಗಳಾಗಿ (ಬಿ.ಎಲ್.ಓ) ಕರ್ತವ್ಯಕ್ಕೆ ನೇಮಿಸಿ ಆದೇಶಿಸಲಾಗಿತ್ತು. ಕರ್ತವ್ಯಕ್ಕೆ ಹಾಜರಾಗದೆ, ಇಲ್ಲಸಲ್ಲದ ಸಬೂಬು ಹೇಳಿ ಇವರು ಲೋಪ ಎಸಗಿದ್ದಾರೆ ಎಂದು ಉಪವಿಭಾಗಾಧಿಕಾರಿ ವರದಿ ಸಲ್ಲಿಸಿದ್ದರು.

Exit mobile version