ಚುನಾವಣೆ ಬಳಿಕ ಸಿದ್ದರಾಮಯ್ಯ ಸರ್ಕಾರ ಇರುವುದಿಲ್ಲ

0
15
ಈಶ್ವರಪ್ಪ

ಕುಷ್ಟಗಿ: ಲೋಕಸಭೆ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಇರುವುದಿಲ್ಲ. ಈ ಮಾತು ನೂರಕ್ಕೆ ನೂರರಷ್ಟು ಸತ್ಯ. ರಾಜ್ಯದಲ್ಲಿ ಕಾಂಗ್ರೆಸ್ ಹೆಸರು ಹೇಳದಂತಹ ಸ್ಥಿತಿ ಇದೆ ಎಂದು ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದರು.
ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶಾದ್ಯಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪರವಾಗಿ ಬಿರುಗಾಳಿ ಬೀಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ೨೮ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವ ಮೂಲಕ ಪ್ರಧಾನಮಂತ್ರಿ ಅವರ ಕೈ ಬಲಪಡಿಸಲಾಗುತ್ತದೆ ಎಂದರು.
ಕಾಂಗ್ರೆಸ್ ಎರಡ್ಮೂರು ಸ್ಥಾನಗಳಲ್ಲೂ ಗೆಲ್ಲಲು ಸಾಧ್ಯವಿಲ್ಲ ಎನ್ನುವುದನ್ನು ಕಾಂಗ್ರೆಸ್ ಮುಖಂಡರು ತಿಳಿದುಕೊಳ್ಳಬೇಕಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.
ಗ್ಯಾರಂಟಿಗಳು ನಿಲ್ಲುತ್ತವೆ: ರಾಜ್ಯದಲ್ಲಿ ವಾಮಮಾರ್ಗದಿಂದ ಮತದಾರರಿಗೆ ಮಂಕು ಬೂದಿ ಎರಚಿ ಐದು ಗ್ಯಾರಂಟಿಗಳನ್ನು ನೀಡಿ, ಯಾಮಾರಿಸಿ ಅಧಿಕಾರಿಕ್ಕೆ ಬಂದಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆ ಮುಗಿದ ಬಳಿಕ ಎಲ್ಲಾ ಗ್ಯಾರಂಟಿಗಳನ್ನು ನಿಲ್ಲಿಸುವ ಮೂಲಕ ಮತದಾರರಿಗೆ ದ್ರೋಹ ಬಗೆಯಲಿದೆ ಎಂದು ಈಶ್ವರಪ್ಪ ಹೇಳಿದರು.

Previous articleಬಡವರ, ದೀನದಲಿತರ ಪರ ಬಜೆಟ್
Next article5555 ಕೆಜಿ ತೂಕದ ನಾಣ್ಯಗಳಿಂದ ಸ್ವಾಮೀಜಿ ತುಲಾಭಾರ