ಚುನಾವಣೋತ್ತರ ಸಮೀಕ್ಷೆ: ರಾಜಸ್ಥಾನದಲ್ಲಿ ಬಿಜೆಪಿ, ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್

0
11

ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮತದಾನ ಕೊನೆಗೊಂಡ ಬೆನ್ನಲ್ಲೇ ಎಕ್ಸಿಟ್ ಪೋಲ್‌ ಫಲಿತಾಂಶ ಹೊರಬಿದ್ದಿದೆ.
2024ರ ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿಸಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣೆಯಲ್ಲಿ ಹಲವು ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ರಾಜಸ್ಥಾನದಲ್ಲಿ ಕಮಲ ಅರಳಲಿದ್ದು, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಮತದಾರ ಕೈ ಹಿಡಿಯಲಿದ್ದಾನೆ ಎಂದು ಹೇಳಲಾಗಿದೆ.
ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇದ್ದು, ಮಿಜೋರಾಂ ಚುನಾವಣೆಯಲ್ಲಿ ಜೋರಾಂ ಪೀಪಲ್ಸ್ ಮೂವ್ಮೆಂಟ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಆದರೆ, ಯಾರಿಗೂ ಬಹುಮತವಿಲ್ಲ ಎಂದು ಸಮೀಕ್ಷೆಗಳು ಹೇಳಿವೆ.

Previous articleಪಂಚಮಸಾಲಿ ಮೀಸಲಾತಿ: ಡಿ. 5ರಂದು ಸರ್ವಪಕ್ಷ ಶಾಸಕರ ಸಭೆ
Next articleಅಪಘಾತ ತಡೆಗೆ ಬಿಎಂಟಿಸಿ ಬಸ್‌ಗಳಿಗೆ ಹೈಟೆಕ್‌ ತಂತ್ರಜ್ಞಾನ ಅಳವಡಿಕೆ