ಚೆನ್ನೈ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಎರಡು ಗಾಜುಗಳು ಪುಡಿ ಪುಡಿಯಾದ ಘಟನೆ ನಡೆದಿದೆ. ರೈಲಿನ ಗಾಜುಗಳು ಒಡೆದು ಒಳಗೆ ಕಲ್ಲುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನು ಕಂಡು ರೈಲು ಹತ್ತಿದ ಪ್ರಯಾಣಿಕರು ಬೆಚ್ಚಿಬಿದ್ದರು. ಏನು ಮಾಡಬೇಕೆಂದು ತಿಳಿಯದೆ ದಿಗ್ಭ್ರಮೆಗೊಂಡ ಪ್ರಯಾಣಿಕರು ಕೂಡಲೇ ರೈಲ್ವೇ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಭದ್ರತಾ ಪಡೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸಮೀಪದ ಕಣ್ಗಾವಲು ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
