ನವದೆಹಲಿ: ದೇಶದಲ್ಲಿ ಜನಗಣತಿ ಮಾರ್ಚ್ 2027ರ ವೇಳೆಗೆ ಜನಗಣತಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ಇತ್ತೀಚೆಗೆ ದೇಶದಲ್ಲಿ ಜನಗಣತಿ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. ಇದೀಗ ಜನಗಣತಿ ನಡೆಸಲು ಕೇಂದ್ರ ಗೃಹ ಸಚಿವಾಲಯದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಮಾರ್ಚ್ 2027ರ ವೇಳೆಗೆ ಜನಗಣತಿ ಪೂರ್ಣಗೊಳ್ಳಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಿನ್ನೆ ಸಭೆ ನಡೆದಿತ್ತು. ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ, ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರು ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಇದೀಗ ಇಂದು ಜನಗಣತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮೊದಲ ಬಾರಿಗೆ ಜನಗಣತಿಯಲ್ಲಿ ಜಾತಿಗಣತಿ ಸೇರಿಸಲಾಗಿದ್ದು, ಜನಗಣತಿ ವೇಳೆ ಅತ್ಯಾಧುನಿಕ ಮೊಬೈಲ್ ಡಿಜಿಟಲ್ ಗ್ಯಾಜೆಟ್‌ಗಳನ್ನು ಬಳಸಲಿದ್ದಾರೆ. 2027 ರ ವೇಳೆಗೆ ಭಾರತದ ಜನಗಣತಿಯನ್ನು ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ ಎಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.