ಹುಬ್ಬಳ್ಳಿ: ಮುಖ್ಯಮಂತ್ರಿಗಳ ಜನಪ್ರಿಯತೆ ಹೆಚ್ಚಾದಂತೆ ಅಡ್ಡಿ ಆತಂಕಗಳೂ ಹೆಚ್ಚಾಗಿವೆ. ಮುಡಾ ಹಗರಣದ ವಿಚಾರಣೆಗೆ ಹಾಜರಾಗಿದ್ದಾರೆ. ಯಾವ ಸಮಸ್ಯೆಯೂ ಆಗದಂತೆ ಆರೋಪದಿಂದ ಹೊರ ಬರಲಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಬುಧವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಕಾನೂನು ಬದ್ಧರಾಗಿ ನಮ್ಮ ಮುಖ್ಯಮಂತ್ರಿಗಳು ಮುಂಚೂಣಿಯಲ್ಲಿ ಇರ್ತಾರೆ. ವಿಚಾರಣಗೆ ಸಹಕರಿಸಬೇಕಾಗಿರುವುದು ಎಲ್ಲರ ಕರ್ತವ್ಯ.
16 ಸಾವಿರ ಕೋಟಿ ಎಲೆಕ್ಟ್ರೋಲ್ ಬಾಂಡ್ ಹಗರಣ ಆಗಿದೆ ಎಂದು ಸ್ವತಃ ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾದರೆ ಮೋದಿ ರಾಜೀನಾಮೆ ಕೊಡ್ತಾರಾ ಎಂದು ಪ್ರಶ್ನಿಸಿದರು.