ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯ ಪ್ರತಿಭಟನಾ ಮೆರವಣಿಗೆ

0
10

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ‌ ಹಗರಣ,‌ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಅನುದಾನ ದುರ್ಬಳಕೆ‌ ಹಾಗೂ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಠಾಚಾರ ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಅಧಿವೇಶನ ಆರಂಭಕ್ಕೂ ಮೊದಲು ಬಿಜೆಪಿ ನಾಯಕರಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು. ಶಾಸಕರ ಭವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಮಾಲಾರ್ಪಣೆ ಮಾಡಿದರು. ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್, ವಿಶ್ವನಾಥ್ ಸೇರಿದಂತೆ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾದರು. ಈ ಸಂಧರ್ಭದಲ್ಲಿ ಬಿಜೆಪಿ ರಾಜಾಧ್ಯಕ್ಷ ಬಿ. ವೈ. ವಿಜಯೇಂದ್ರ ಮಾತನಾಡಿ ಮೈಸೂರಿನ ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು. ಈ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಭಾಗಿಯಾಗಿದ್ದು, ಸಿಎಂ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದಲಿತರಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್‌ ಸರ್ಕಾರ ಕೊಳ್ಳೆ ಹೊಡೆದಿದೆ. ವಾಲ್ಮೀಕಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿಕೊಂಡಿದ್ದಾರೆ ಎಂದರು.

Previous articleಹೆಸ್ಕಾಂ ಗ್ರಾಹಕರಿಗಾಗಿ ವಾಟ್ಸಾಪ್ ಸಹಾಯವಾಣಿ
Next articleಬ್ರ್ಯಾಂಡ್ ಬೆಂಗಳೂರು: ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ