ದಾವಣಗೆರೆ: ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಪ್ರಕರಣ ಇಡೀ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಡುಗಾಟಿಕೆ ಮಾಡದೇ ಸೂಕ್ತ ನಿರ್ದೇಶನ ನೀಡುವ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಪ್ರಕರಣ ರಾಜ್ಯ ಸೇರಿದಂತೆ ದೇಶಾದ್ಯಂತ ಗಂಭೀರವಾದ ಚರ್ಚೆ ನಡೆಯುತ್ತಿದೆ. ಜನಿವಾರ ಎಂದಾಕ್ಷಣ ಕೇವಲ ಬ್ರಾಹ್ಮಣ ಸಮಾಜದವರು ಹಾಕುವುದಿಲ್ಲ ಬೇರೆ ಬೇರೆ ಸಮುದಾಯಗಳು ಪವಿತ್ರ ದಾರವನ್ನು ಹಾಕುತ್ತಿದ್ದಾರೆ. ಹೀಗಾಗಿ ಆ ಸಮುದಾಯಗಳಿಗೆ ಧಕ್ಕೆ ಆಗದೆ ರೀತಿಯಲ್ಲಿ ಬ್ರಾಹ್ಮಣ ಸಮುದಾಯ ಹಾದಿಯಾಗಿ ಯಾವುದೇ ಸಮುದಾಯಗಳ ಭಾವನೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡು ಮತ್ತೆ ಪುನರ್ ವರ್ತನೆ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.