Home News ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಡೆ ಖಂಡನೀಯ

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಡೆ ಖಂಡನೀಯ

ಹುಬ್ಬಳ್ಳಿ: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಜನೌಷಧಿ ಕೇಂದ್ರಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಬಡಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಒದಗಿಸುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವುದು ಒಳ್ಳೆಯ ಬೆಳವಣಿಗೆ ಅಲ್ಲ, ರಾಜ್ಯದಲ್ಲಿ ಕನ್ನಡ ಶಾಲೆಗಳು ಇನ್ನೂ ಅಭಿವೃದ್ಧಿ ಕಾಣಬೇಕಾಗಿದೆ. ಹೀಗಿರುವಾಗ ಉರ್ದು ಭಾಷೆಗೆ ಪ್ರೋತ್ಸಾಹ ನೀಡುತ್ತಿರುವುದು ಸರಿಯಲ್ಲ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ನಿರತವಾಗಿದ್ದು, ಈ ಸಂಬಂಧ ರಾಜ್ಯ ಬಿಜೆಪಿ ನಾಯಕರು, ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ರೂಪಿಸಲಿದ್ದಾರೆ ಎಂದು ಹೇಳಿದ ಅವರು, ಕನ್ನಡ ಭಾಷೆಯ ಕುರಿತು ತಮಿಳು ನಟ ಕಮಲ್ ಹಾಸನ್ ಹೇಳಿಕೆ ಖಂಡನಾರ್ಹ ಎಂದರು.

Exit mobile version