ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ಗುಂಡಿನ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯಾನಕ ಉಗ್ರರ ದಾಳಿ ನಡೆದಿದೆ.
ಟ್ರೆಕ್ಕಿಂಗ್‌ಗೆ ತೆರಳಿದ್ದ ಪ್ರವಾಸಿಗರ ಮೇಲೆ ಶಸ್ತ್ರಸಜ್ಜಿತ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಪಹಲ್ಲಾಮ್‌ನ ಬೈಸರನ್ ಕಣಿವೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಸರನ್ ಹುಲ್ಲುಗಾವಲುಗಳಲ್ಲಿ ಕುದುರೆ ಸವಾರಿಯನ್ನು ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಇಬ್ಬರು ಅಥವಾ ಮೂವರು ಬಂದೂಕುಧಾರಿಗಳು ಮನಬಂದಂತೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪಹಲ್ಗಾಮ್‌ನಲ್ಲಿ ಇಂದು ನಡೆದ ಭಯೋತ್ಪಾದಕ ದಾಳಿಯನ್ನು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಖಂಡಿಸಿದ್ದು, ಈ ವಿಷಯದ ಬಗ್ಗೆ ಸಮಗ್ರ ತನಿಖೆಗೆ ಕರೆ ನೀಡಿದ್ದಾರೆ. ದಾಳಿಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.