ನವದೆಹಲಿ: 2024ರ ಸೆಪ್ಟೆಂಬರ್ ತಿಂಗಳ ಒಳಗೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಆರ್ಟಿಕಲ್ 370 ಅನ್ನು ರದ್ದುಗೊಳಿಸಲು ವಿಧಾನಸಭೆಗೆ ಅಧಿಕಾರವಿಲ್ಲ. ಆರ್ಟಿಕಲ್ 370 ರದ್ದತಿಗೆ ರಾಷ್ಟ್ರಪತಿಗಳಿಗೆ ಕೂಡ ಅಧಿಕಾರವಿದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ 370ನೇ ವಿಧಿಯನ್ನು (Article 370) ರದ್ದುಪಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದ ಸುಪ್ರಿಂಕೋರ್ಟ್‌ನ ವಿಭಾಗೀಯ ಪೀಠವು ರಾಜ್ಯದ ಸ್ಥಾನಮಾನವನ್ನು ಮರು ಸ್ಥಾಪಿಸಬೇಕು ಎಂದು ಸೂಚಿಸಿದೆ. ಸೆಪ್ಟೆಂಬರ್ 30ರೊಳಗೆ ಚುನಾವಣೆಯನ್ನು ನಡೆಸಿ ಅತಿ ಶೀಘ್ರದಲ್ಲಿ ರಾಜ್ಯದ ಸ್ಥಾನಮಾನವನ್ನು ಮರು ಸ್ಥಾಪಿಸಬೇಕು ಎಂದು ಸೂಚಿಸಿದೆ. ಚುನಾವಣೆ ನಡೆಸಲು ಅದು ಚುನಾವಣಾ ಆಯೋಗಕ್ಕೂ ಸೂಚನೆ ನೀಡಿದೆ.