Home News ಜಾತಿಗಣತಿ: ರಾಹುಲ್ ಗಾಂಧಿಯವರ ಕಾಪಿ ಮಾಡಿದ ಕೇಂದ್ರ ಸರ್ಕಾರ

ಜಾತಿಗಣತಿ: ರಾಹುಲ್ ಗಾಂಧಿಯವರ ಕಾಪಿ ಮಾಡಿದ ಕೇಂದ್ರ ಸರ್ಕಾರ

ದಾವಣಗೆರೆ: ಜಾತಿಗಣತಿಗೆ ಮುಂದಾಗಿರುವ ಕೇಂದ್ರ ಸರ್ಕಾರದವರು ರಾಹುಲ್ ಗಾಂಧಿಯವರನ್ನು ಕಾಪಿ ಮಾಡುತ್ತಿದ್ದಾರೆ. ಅವರೇನು ಮಾಡುತ್ತಾರೋ ಮಾಡಲಿ. ನಮ್ಮದು ಅಭ್ಯಂತರವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ಸೋಮವಾರ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರ 95ನೇ ಜನ್ಮ ದಿನಾಚರಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿಗೆ ಮುಂದಾಗುವ ಮೂಲಕ ಕೇಂದ್ರ ಸರ್ಕಾರದವರು ರಾಹುಲ್ ಗಾಂಧಿಯವರನ್ನು ಕಾಪಿ ಮಾಡುತ್ತಿದ್ದಾರೆ ಎಂದರು.
ದುರ್ಬಲ ವರ್ಗದವರಿಗೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬಲು ನಾವು ಮರು ಸಮೀಕ್ಷೆ ಮಾಡುತ್ತಿದ್ದೇವೆ. ನಿಯಮಾನುಸಾರ ಮರು ಸಮೀಕ್ಷೆ ಕೈಗೊಳ್ಳಲು ನಮ್ಮ ಸರ್ಕಾರ ಮುಂದಾಗಿದೆ ಎಂದು ಹೇಳಿದರು.
ಕಾಂತರಾಜು ಆಯೋಗದ ವರದಿ ಜಾರಿಯಾಗಿದ್ದರೆ ಹಿಂದುಳಿದ ವರ್ಗಕ್ಕೆ ಶಕ್ತಿ ಬರುತ್ತಿತ್ತು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

Exit mobile version