ಜಾತಿಗಣತಿ ವರದಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ

0
28

ಮಂಗಳೂರು: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು.
ದರೋಡೆಕೋರರನ್ನು ಕೂಡಲೆ ಪತ್ತೆ ಹಚ್ಚಲು ಸೂಚನೆ: ಉಲ್ಲಾಳ್‌ನಲ್ಲಿ ನಡೆದಿರುವ ದರೋಡೆ ಪ್ರಕರಣದ ಬಗ್ಗೆ ಮಾತನಾಡಿ ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Previous articleಬ್ಯಾಂಕ್‌ ದರೋಡೆಯಿಂದ ಸಿಎಂಗೆ ರಾಜ್ಯದ ಕಾನೂನು-ಸುವ್ಯವಸ್ಥೆಯ ಸತ್ಯ ದರ್ಶನ
Next articleಗವಿಮಠ ಬಿಟ್ಟು ಹೊರಗೆ ಕರೆದೊಯ್ಯದಿರಿ: ಗವಿಶ್ರೀ ಕಣ್ಣೀರು