ಬೆಂಗಳೂರು: ಜಾತಿ ಜನಗಣತಿ ವರದಿ ಕುರಿತಂತೆ ಮೊದಲು ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ ಬಳಿಕ ನೋಡೋಣ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಜಾರಿಯಿಂದ ಸರ್ಕಾರ ಬಿದ್ದು ಹೋಗುತ್ತೆ ಎನ್ನುವುದಾದರೆ ಬಿದ್ದು ಹೋಗಲಿ ಎಂಬ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಜಾತಿ ಜನಗಣತಿ ವರದಿಯನ್ನು ಮುಂದಿನ ಬಾರಿ ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ತರಲಾಗುವುದು. ಒಂದು ಬಾರಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ. ಆಮೇಲೆ ನೋಡೋಣ ಎಂದರು.