ಜಾತಿ ಗಣತಿ ವರದಿ ಅನುಷ್ಠಾನ: ಲಿಂಗಾಯತರು, ಒಕ್ಕಗಲಿರನ್ನ ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ


ದಾವಣಗೆರೆ: ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ ಎಂದು ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಜಾತಿ ಗಣತಿ ಅನುಷ್ಠಾನ ಸ್ಟೋಟಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಮ್ಮನೆ ಅವರು ಬಿಡುಗಡೆ ಮಾಡ್ತಿವಿ ಅಂತ ಹೇಳ್ತಾ ಇದಾರೆ. ರಾಜ್ಯದಲ್ಲಿ ಫಸ್ಟ್ ಲಿಂಗಾಯತರು ಸೆಕೆಂಡ್, ಒಕ್ಕಲಿಗರು ಇದ್ದಾರೆ. ಅವರು ನಮ್ಮನ್ನು ಎದುರಾಕಿಕೊಂಡು ರಾಜ್ಯಾಭಾರ ಮಾಡೋಕೆ ಆಗುತ್ತಾ. ಲಿಂಗಾಯತರು, ಒಕ್ಕಲಿಗರು ಇಬ್ಬರು ಸೇರಿ ಹೋರಾಟ ಮಾಡುತ್ತೇವೆ. ವೀರಶೈವ ಲಿಂಗಾಯತ ಮಹಾಸಭಾ ಈಗಾಗಲೇ ಸಭೆ ನಡೆಸಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದರು.