ದಾವಣಗೆರೆ: ಜಾತಿ ಗಣತಿ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಬಿಡುಗಡೆ ಮಾಡುತ್ತೇನೆ ಅಂದಿದ್ದಾರೆ. ಜಾತಿಗಣತಿ ವರದಿ ಬಿಡುಗಡೆ ಮಾಡುವುದಾದರೆ ಮಾಡಲಿ. ಈ ಬಗ್ಗೆ ನಂತರ ಮಾತನಾಡುವೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಜಾತಿಗಣತಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡು ಅಡ್ಡಾಡುತ್ತಿದ್ದಾರೆ. ನೋಡೋಣ ಅದು ಬಿಡುಗಡೆಯಾದ ನಂತರ ಚರ್ಚೆ ಮಾಡಿ, ಮಾತನಾಡುತ್ತೇನೆ. ವರದಿಯಲ್ಲಿ ಏನಿದೆ ಎಂಬ ಸಂಪೂರ್ಣ ಮಾಹಿತಿ ನನಗಿಲ್ಲ. ಆದ್ದರಿಂದ ಮೊದಲು ಅದನ್ನು ಬಿಡುಗಡೆ ಮಾಡಲಿ, ನಂತರ ವೀರಶೈವ ಲಿಂಗಾಯತ ಮಹಾಸಭಾದ ನಿಲುವೇನು ಎಂಬುದನ್ನು ಹೇಳುತ್ತೇನೆ ಎಂದು ತಿಳಿಸಿದರು.