Home ತಾಜಾ ಸುದ್ದಿ ಜಾತಿ ನಿಂದನೆ: ವಕೀಲ ಜಗದೀಶ್ ಬಂಧನ

ಜಾತಿ ನಿಂದನೆ: ವಕೀಲ ಜಗದೀಶ್ ಬಂಧನ

0

ಬೆಂಗಳೂರು: ಜಾತಿ ನಿಂದನೆ ಆರೋಪದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜ ರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಗೋವಾದಲ್ಲಿ ಬಂಧಿಸಿದ್ದಾರೆ. ಜಗದೀಶ್ ವಿರುದ್ಧ ೨೦೨೨ರಲ್ಲಿ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಹಲವು ಬಾರಿ ನೋಟಿಸ್ ಜಾರಿಗೊಳಿಸಿದರೂ ಹಾಜ ರಾಗಿರದ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು. ಜಗದೀಶ್ ಅವರನ್ನು ಗೋವಾದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆ ತರಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version