Home ನಮ್ಮ ಜಿಲ್ಲೆ ಕಲಬುರಗಿ ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ

ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ

0

ಕಲಬುರಗಿ: ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜೀನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಗುರುವಾರ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತಿಳಿಸಿದರು.

ದಾವಣಗೆರೆ ಮಹಿಳೆಗೆ ಥಳಿತ ಪ್ರಕರಣ: ಕಾನೂನು ಉಲ್ಲಂಘಿಸಿದರೆ ಬಲಿ ಹಾಕುತ್ತೇವೆ ದಾವಣಗೆರೆಯಲ್ಲಿ ಅನೈತಿಕ ಸಂಬಂಧ ಆರೋಪಿಸಿ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಕೂಡ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರಗಿಯಲ್ಲಿ ಬುಧವಾರ ಏರ್ಪಡಿಸಲಾಗಿದೆ. ಮೈಸೂರು ಹಾಗೂ ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನ್ಯಾಷನಲ್ ಹೆರಾಲ್ಡ್ ವಿಷಯ ಕುರಿತು ಮಾತನಾಡಿದ ಅವರು, ಬಿಜೆಪಿಯರು ರಾಜಕೀಯ ಉದ್ದೇಶದಿಂದ ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಇಗಿಂದಲ್ಲ ನೂರಾರು ವರ್ಷಗಳಿಂದ ಇರೋದು. ಈಗ ಅವರು ಆಸ್ತಿಗಳನ್ನು ಮುಟ್ಟುಗೋಲು ಹಾಕೋದು ಚಾರ್ಜ್ ಶೀಟ್ ಹಾಕೋದು ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮೇಲೆ ಚಾರ್ಜ್ ಶೀಟ್ ಹಾಕೋದು ರಾಜಕೀಯ ಧ್ವೇಷದಿಂದ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Exit mobile version