ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ

0
10

ಜಾತ್ರೆಯ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಐವರು ಗಂಭೀರ ಸ್ಥಿತಿಯಲ್ಲಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿತು ಎನ್ನಲಾಗಿದೆ.
ಕೂಡಲೇ ಅಸ್ವಸ್ಥಗೊಂಡವರನ್ನು ಸ್ಥಳೀಯ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ತೀವ್ರ ಅಸ್ವಸ್ಥಗೊಂಡ ಐವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ.ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಸಾದ ಸೇವಿಸಿದವರಲ್ಲಿ ವಾಂತಿಭೇದಿ ಕಂಡುಬಂದ ತಕ್ಷಣವೇ ಎಲ್ಲರಿಗೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗಿದೆ. ಪ್ರತಿ ಗಂಟೆಗೂ ರೋಗಿಗಳ ಮಾನಿಟರ್ ಚೆಕ್ ಮಾಡಲಾಗುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Previous articleಭಗವಂತ ಭಕ್ತವತ್ಸಲ
Next articleಸಂಯುಕ್ತ ಕರ್ನಾಟಕ ನೌಕರ ಶಶಿಧರ ಹುಣಸೀಮರದ ನಿಧನ